ಕೆ ಆರ್ ನಗರ ಪೊಲೀಸ್ ಠಾಣಾ ಸರಹದ್ದು ಹಂಪಾಪುರ ಗ್ರಾಮದ ಪಿರ್ಯಾದಿಯವರ ಸೊಸೆ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಸಾಲಿಗ್ರಾಮ ಪೊಲೀಸ್ ಠಾಣಾ ಸರಹದ್ದು ಭೇರ್ಯ ಗ್ರಾಮದ ಪಿರ್ಯಾದಿಯವರ ತಮ್ಮ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಬೆಟ್ಟದಪುರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಬೆಟ್ಟದಪುರ ಬಸ್ ನಿಲ್ದಾಣದ ಹತ್ತೀರ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಅಪರಿಚಿತ ವ್ಯಕ್ತಿ ಸಾಲೆಕೊಪ್ಪಲು ಗ್ರಾಮದ ಪಿರ್ಯಾದಿಯವರ ಕೊರಳಲ್ಲಿದ್ದ ಚಿನ್ನದ ಸರವನ್ನು ಕಳ್ಳತನ ಮಾಡಿರುತ್ತಾರೆ ಅದರ ಬೆಲೆ ಸುಮಾರು 1,20,000/- ರೂ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಸಿ ಇ ಎನ್ ಪೊಲೀಸ್ ಠಾಣಾ ಸರಹದ್ದು ಹಾಸನ - ಮೈಸೂರು ಮುಖ್ಯರಸ್ತೆಯಲ್ಲಿರುವ ಅರ್ಕೇಶ್ವರ ದೇವಸ್ಥಾನದ ಹಿಂಭಾಗ ಅಕ್ರಮವಾಗಿ ಗಾಂಜಾ ಮಾರುತ್ತಿದ್ದು ಪಿಎಸ್ಐ ಹಾಗೂ ಸಿಬ್ಬಂದಿ ಗಳು ದಾಳಿಮಾಡಿ ಗಾಂಜಾ ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment