ಕೆ ಆರ್ ನಗರ ಪೊಲೀಸ್ ಠಾಣಾ ಸರಹದ್ದು ಆತ್ತಿಗುಪ್ಪೆ ಗ್ರಾಮದ ಪಿರ್ಯಾದಿಯವರ ಮಗನಿಗೆ ಸರ್ಕಾರಿ ಸ್ಕೂಲ್ ಅರಕೆರೆ ಕೊಪ್ಪಲು ಗ್ರಾಮದ ಹತ್ತಿರ ಎದುರಿಗೆ ಬಂದ ಕಾರು ಚಾಲಕನ ಅತೀವೇಗ ಹಾಗೂ ಅಜಾಗರುಕತೆಯಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ಪಿರ್ಯಾದಿಯವರ ಮಗ ಮೃತರಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಸರಗೂರು ಪೊಲೀಸ್ ಠಾಣಾ ಸರಹದ್ದು ತುಂಬುಸೋಗೆ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿ ಕಟ್ಟಿಕೊಂಡು ಆಂದರ್ - ಬಾಹರ್ ಇಸ್ಪೀಟ್ ಆಟವಾಡುತ್ತಿದ್ದು ಬಾತ್ಮೀದಾರರು ನೀಡಿದ ಮಾಹಿತಿ ಮೇರೆಗೆ ಪಿಎಸ್ ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ 52 ಇಸ್ಪೀಟ್ ಕಾರ್ಡ್ ಗಳನ್ನು ವಶಪಡಿಸಿಕೊಂಡು 03 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment