ಮೈಸೂರು ದಕ್ಷಿಣ ಪೊಲೀಸ್ ಠಾಣಾ ಸರಹದ್ದು ಎ ಪಿ ಎಂ ಸಿ ಬಂಡಿಪಾಳ್ಯದಲ್ಲಿ ಪಿರ್ಯಾದಿಯವರ ಆಂಗಡಿಯಲ್ಲಿ ಯಾರೋ ಕಳ್ಳರು ಕಳ್ಳತನ ಮಾಡಿದ್ದು ಸುಮಾರು 1,60,000/- ರೂ ನಗದು ಆಗಿರುತ್ತದೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಜಯಪುರ ಪೊಲೀಸ್ ಠಾಣಾ ಸರಹದ್ದು ಉದ್ಬೂರು ಗ್ರಾಮದ ಪಿರ್ಯಾದಿಯವರ ಗಂಡ ದೀರ್ಘಕಾಲದ ಹೊಟ್ಟೆನೋವಿನಿಂದ ಬಳಲುತ್ತಿದ್ದು ಹೊಟ್ಟೆನೋವು ತಾಳಲಾರದೆ ವಿಷದ ಮಾತ್ರೆ ಸೇವಿಸಿ ಮೃತರಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಇಲವಾಲ ಪೊಲೀಸ್ ಠಾಣಾ ಸರಹದ್ದು ಭದ್ರೆಗೌಡನಕೊಪ್ಪಲು ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಟಿ ನರಸೀಪುರ ಪೊಲೀಸ್ ಠಾಣಾ ಸರಹದ್ದು ಪಟ್ಟಣದ ವಿನಯಕ ಕಾಲೋನಿ ಹತ್ತಿರ ಹೊರವಲಯದಲ್ಲಿ ಹಣವನ್ನು ಪಣವಾಗಿ ಕಟ್ಟಿಕೊಂಡು ಅಂದರ್ - ಬಾಹರ್ ಆಟವಾಡುತ್ತಿದ್ದು ಬಾತ್ಮೀದಾರರು ನೀಡಿದ ದೂರಿನ ಮೇರೆಗೆ ಪಿಎಸ್ ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ 05 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment