ಜಯಪುರ ಪೊಲೀಸ್ ಠಾಣಾ ಸರಹದ್ದು ಗೋಪಾಲಪುರ ಗ್ರಾಮದ ಸ.ಹಿ.ಪ್ರಾ.ಶಾಲೆಯ ಹಿಂಬಾಗ ಹಣವನ್ನು ಪಣವಾಗಿ ಕಟ್ಟಿಕೊಂಡು ಆಂದರ್ - ಬಾಹರ್ ಇಸ್ಪೀಟ್ ಆಟವಾಡುತ್ತಿದ್ದು ಬಾತ್ಮೀದಾರರು ನೀಡಿದ ಮಾಹಿತಿ ಮೇರೆಗೆ ಪಿಎಸ್ ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ 3450/- ರೂ ಹಣವನ್ನು ವಶಪಡಿಸಿಕೊಂಡು 06 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.
ವರುಣ ಪೊಲೀಸ್ ಠಾಣಾ ಸರಹದ್ದು ಕುಂಬ್ರಳ್ಳಿ ಮಠ ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿರುತ್ತದೆ.
ಸಾಲಿಗ್ರಾಮ ಪೊಲೀಸ್ ಠಾಣಾ ಸರಹದ್ದು ಕುಪ್ಪೆಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಆಕ್ರಮವಾಗಿ ಮದ್ಯಮಾರುತ್ತಿದ್ದು ಬಾತ್ಮೀದಾರರು ನೀಡಿದ ಮಾಹಿತಿ ಮೇರೆಗೆ ಪಿಎಸ್ ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತಾರೆ.
ಬಿಳಿಕೆರೆ ಪೊಲೀಸ್ ಠಾಣಾ ಸರಹದ್ದು ಶ್ಯಾನಬೋಗನಹಳ್ಳಿ ಗ್ರಾಮದ ಪಿರ್ಯಾದಿಯವರ ಮನೆಯಲ್ಲಿ ಯಾರೋ ಕಳ್ಳರು ಸುಮಾರು 7,50,000/-ರೂ ಚಿನ್ನದ ಸರವನ್ನು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ಮಾಹಿತಿ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment