ಇಲವಾಲ ಪೊಲೀಸ್ ಠಾಣಾ ಸರಹದ್ದು ಇಲವಾಲ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿ ಕಳ್ಳರು ಅಫೀಸ್ ರೂಮ್ ನ ಬಾಗಿಲು ಹೊಡೆದು ಸುಮಾರು 37,300/- ರೂ ಬೆಲೆಯ ಸಾಮಾನುಗಳನ್ನು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಹೊಸೂರು ಗೇಟ್ ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹೆಚ್ ಡಿ ಕೋಟೆ ಪೊಲೀಸ್ ಠಾಣಾ ಸರಹದ್ದು ಟೌನಿನಲ್ಲಿ ಅಕ್ರಮವಾಗಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರುತ್ತಿದ್ದು ಬಾತ್ಮೀದಾರರು ನೀಡಿದ ಮಾಹಿತಿ ಮೇರೆಗೆ ಪಿಎಸ್ ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ 100-150 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತಾರೆ.
ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಸುಂಡ ಇಂಡಸ್ಟ್ರೀಯಲ್ ಹತ್ತಿರ ನಿಲ್ಲಿಸಿದ್ದ ಬೈಕನ್ನು ಕಳ್ಳರು ಕಳ್ಳತನ ಮಾಡಿರುತ್ತಾರೆ ಅದರ ಬೆಲೆ ಸುಮಾರು 2,50,000/- ರೂ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment